ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಡಿಪಿ ತೊರೆದ ಹಿರಿಯ ನಾಯಕ ಕೆಸಿನೆನಿ: ಚಂದ್ರಬಾಬು ನಾಯ್ಡು ವಿರುದ್ಧ ಅಸಮಾಧಾನ

Published 6 ಜನವರಿ 2024, 6:05 IST
Last Updated 6 ಜನವರಿ 2024, 6:05 IST
ಅಕ್ಷರ ಗಾತ್ರ

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಹಿರಿಯ ನಾಯಕ ಹಾಗೂ ಹಾಲಿ ಸಂಸದ ಕೆಸಿನೆನಿ ಶ್ರೀನಿವಾಸ್‌ ಅವರು ಪಕ್ಷ ತೊರೆಯುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಅಲ್ಲದೆ ಲೋಕಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಪಕ್ಷಕ್ಕೆ ನನ್ನ ಅಗತ್ಯ ಇಲ್ಲ ಎಂದು ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ತಿಳಿದುಕೊಂಡಿದ್ದರಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಶೀಘ್ರವೇ ದೆಹಲಿಗೆ ತೆರಳಿ ಲೋಕಸಭಾ ಸ್ಪೀಕರ್‌ ಅವರನ್ನು ಭೇಟಿ ಮಾಡಿ ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

‘ಪಕ್ಷಕ್ಕೆ ನನ್ನ ಅಗತ್ಯವಿಲ್ಲ ಎಂದು ಚಂದ್ರಬಾಬು ನಾಯ್ಡು ಅವರು ತಿಳಿದುಕೊಂಡಿದ್ದಾರೆ. ಹೀಗಾಗಿ ನಾನು ಪಕ್ಷದಲ್ಲಿ ಮುಂದುವರಿಯುವುದು ಸರಿಯಲ್ಲ. ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೂಡಲೇ ಪಕ್ಷವನ್ನೂ ತೊರೆಯುತ್ತೇನೆ’ ಎಂದು ಹೇಳಿದ್ದಾರೆ.

2014 ಹಾಗೂ 2019ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ 57 ವರ್ಷದ ಕೆಸಿನೆನಿ ಅವರು, ತೆಲುಗು ರಾಜ್ಯಗಳಲ್ಲಿ ಕೆಸಿನೆನಿ ನಾನಿ ಎಂದೇ ಖ್ಯಾತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT