ಅಮರಾವತಿ: ಆಂಧ್ರಪ್ರದೇಶದ ಮಾಜಿ ಸಚಿವ ಹಾಗೂ ವೈಎಸ್ಆರ್ಸಿಪಿ ಪಕ್ಷದ ಹಿರಿಯ ಮುಖಂಡ ಎಂ.ಶ್ರೀನಿವಾಸ ರಾವ್ (ಅವಂತಿ) ಗುರುವಾರ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ರಾಜಕೀಯದಿಂದ ದೂರವಿರುವ ನಿರ್ಧಾರ ತೆಗೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿದ್ದೇನೆ. ಹಾಗೇ ಪಕ್ಷದ ಜವಾಬ್ದಾರಿಗಳಿಂದಲೂ ಬಿಡುಗಡೆಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಆಡಳಿತ ಪಕ್ಷದ ಕಾರ್ಯವೈಖರಿಗಳು ಹಾಗೂ ವೈಎಸ್ಆರ್ಸಿಪಿ ಪಕ್ಷದಲ್ಲಿ ಆಂತರಿಕವಾಗಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ವೈಎಸ್ಆರ್ಸಿಪಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೂ ಈ ವೇಳೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.