ಚೆನ್ನೈ: ತಮಿಳುನಾಡು ಸಚಿವರಾದ ವಿ.ಸೆಂಥಿಲ್ ಬಾಲಾಜಿ ಮತ್ತು ಕೆ.ಪೊನ್ಮುಡಿ ಅವರು ಎಂ.ಕೆ ಸ್ಟಾಲಿನ್ ನೇತೃತ್ವದ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಸ್ಟಾಲಿನ್ ಮಾಡಿರುವ ಶಿಫಾರಸನ್ನು ರಾಜ್ಯಪಾಲ ಆರ್.ಎನ್.ರವಿ ಅನುಮೋದಿಸಿದ್ದಾರೆ ಎಂದು ರಾಜಭವನ ಭಾನುವಾರ ತಿಳಿಸಿದೆ.

ಪದ್ಮನಾಭಪುರಂ ಶಾಸಕ ಟಿ. ಮನೋ ತಂಗರಾಜ್ ಅವರು ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದು, ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಾಲಾಜಿ ಅವರು ‘ಉದ್ಯೋಗಕ್ಕೆ ಹಣ’ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಎದುರಿಸುತ್ತಿದ್ದಾರೆ. ಸಚಿವ ಸ್ಥಾನದಿಂದ ಕೆಳಗಿಳಿಯದೆ ಇದ್ದರೆ ಜಾಮೀನು ರದ್ದು ಮಾಡುವುದಾಗಿ ಈಚೆಗೆ ಸುಪ್ರೀಂ ಕೋರ್ಟ್ ಅವರಿಗೆ ಎಚ್ಚರಿಸಿತ್ತು.

ಪೊನ್ಮುಡಿ ಅವರು ಶೈವ–ವೈಷ್ಣವ ಸಮುದಾಯ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.