ನವದೆಹಲಿ: ರಾಜ್ಯ ಸರ್ಕಾರಗಳಿಗೆ ನಿಗದಿಪಡಿಸಲಾದ ‘ಕೋವಿಶೀಲ್ಡ್’ ಲಸಿಕೆಯ ಪ್ರತಿ ಡೋಸ್‌ನ ದರವನ್ನು ₹100 ಕಡಿತಗೊಳಿಸಲು ಸೀರಂ ಇನ್‌ಸ್ಟಿಟ್ಯೂಟ್ ಬುಧವಾರ ನಿರ್ಧರಿಸಿದೆ.

’ಲಸಿಕೆಯ ಪ್ರತಿ ಡೋಸ್‌ಗೆ ರಾಜ್ಯಗಳಿಗೆ ₹400 ನಿಗದಿಪಡಿಸಲಾಗಿತ್ತು. ಈಗ ಅದನ್ನು ₹300ಕ್ಕೆ ಇಳಿಸಲಾಗಿದೆ. ಸಾಮಾಜಿಕ ಕಾರ್ಯದ ದೃಷ್ಟಿಯಿಂದ ಈ ದರ ಕಡಿಮೆಗೊಳಿಸಲಾಗಿದೆ. ಈ ದರವು ತಕ್ಷಣದಿಂದಲೇ ಜಾರಿಯಾಗಲಿದೆ’ ಎಂದು ಸೀರಂ ಇನ್‌ಸ್ಟಿಟ್ಯೂಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆದಾರ್ ಪೂನಾವಾಲ್ಲಾ ತಿಳಿಸಿದ್ದಾರೆ.

‘ಈ ದರ ಕಡಿತಗೊಳಿಸಿದ್ದರಿಂದ ರಾಜ್ಯ ಸರ್ಕಾರಗಳಿಗೆ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದರಿಂದ, ಮತ್ತಷ್ಟು ಜನರ ಜೀವ ರಕ್ಷಿಸಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಹೊಸದಾಗಿ ಪ್ರಕಟಿಸಿದ್ದ ಲಸಿಕೆ ನೀತಿ ಅನ್ವಯ, ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ ₹400 ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹600ಕ್ಕೆ ಮಾರಾಟ ಮಾಡುವುದಾಗಿ ತಿಳಿಸಿತ್ತು. ಅದೇ ರೀತಿ, ಕೊವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ಅನ್ನು ರಾಜ್ಯ ಸರ್ಕಾರಗಳಿಗೆ ₹600 ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹1200 ನೀಡುವುದಾಗಿ ಭಾರತ್ ಬಯೊಟೆಕ್ ತಿಳಿಸಿತ್ತು.

ಈ ಲಸಿಕೆ ದರಗಳ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ವಿವಿಧ ವಲಯಗಳಿಂದ ಟೀಕೆಗಳು ವ್ಯಕ್ತವಾಗಿದ್ದವು. ಏಕರೂಪದ ದರ ನಿಗದಿಪಡಿಸಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು.

ಕೋವಿಡ್ ಸಂಬಂಧಿ ಕಾರ್ಯಕ್ಕೆ ವಾಯುಪಡೆ 24 ಗಂಟೆ ಸಿದ್ಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.