ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ₹1.32 ಕೋಟಿ ಮೌಲ್ಯದ ಹೆರಾಯಿನ್, ಮೆಫೆಡ್ರೋನ್‌ ಡ್ರಗ್ಸ್ ವಶ; 7 ಮಂದಿ ಬಂಧನ

Published 20 ಏಪ್ರಿಲ್ 2024, 13:56 IST
Last Updated 20 ಏಪ್ರಿಲ್ 2024, 13:56 IST
ಅಕ್ಷರ ಗಾತ್ರ

ಮುಂಬೈ: ನಗರದ ವಿವಿಧ ಭಾಗಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು ₹1.32 ಕೋಟಿ ಮೌಲ್ಯದ ಹೆರಾಯಿನ್‌ ಮತ್ತು ಮೆಫೆಡ್ರೋನ್‌ ಡ್ರಗ್ಸ್ ಅನ್ನು ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾದಕದ್ರವ್ಯ ವಿರೋಧಿ ದಳಕ್ಕೆ (ಎಎನ್‌ಸಿ) ದೊರೆತ ಮಾಹಿತಿ ಮೇರೆಗೆ ನಗರದ ಮಲಾಡ್‌, ವಸೈ ಮತ್ತು ಕುರ್ಲಾ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಮಲಾಡ್‌ನಲ್ಲಿ ನಡೆಸಿದ ಮೊದಲ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸುಮಾರು ₹1.24 ಕೋಟಿ ಮೌಲ್ಯದ ಹೆರಾಯಿನ್‌ ಅನ್ನು ವಶಪಡಿಸಿಕೊಂಡರು ಹಾಗೂ ನಾಲ್ವರನ್ನು ಬಂಧಿಸಿದರು. ನಂತರದ ಶೋಧ ಕಾರ್ಯಾಚರಣೆಯಲ್ಲಿ ಇತರ ಮೂವರನ್ನು ಬಂಧಿಸಲಾಗಿದ್ದು, ಅವರಿಂದ ₹12 ಲಕ್ಷ ಮೌಲ್ಯದ ಮೆಫೆಡ್ರೋನ್‌ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವರ್ಷದಲ್ಲಿ ಇಲ್ಲಿಯವರೆಗೆ ಸುಮಾರು 24 ಪ್ರಕರಣಗಳನ್ನು ಎಎನ್‌ಸಿ ದಾಖಲಿಸಿದ್ದು, 62 ಆರೋಪಿಗಳನ್ನು ಬಂಧಿಸಿದೆ. ಸುಮಾರು ₹31.6 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT