ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ನರಿ ದಾಳಿ: ಇಬ್ಬರು ಮಕ್ಕಳು ಸೇರಿ 7 ಮಂದಿಗೆ ಗಂಭೀರ ಗಾಯ

Published : 8 ಸೆಪ್ಟೆಂಬರ್ 2024, 4:58 IST
Last Updated : 8 ಸೆಪ್ಟೆಂಬರ್ 2024, 4:58 IST
ಫಾಲೋ ಮಾಡಿ
Comments

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಜೆಹಾನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ನರಿ ದಾಳಿ ನಡೆಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಣ್ಯಾಧಿಕಾರಿಗಳ ಪ್ರಕಾರ ಶನಿವಾರ ಗ್ರಾಮಸ್ಥರು ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ತೋಳಗಳ ಗುಂಪೊಂದು ದಾಳಿ ಮಾಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದರು. ಆದರೆ ಅದು ಸಹ ನರಿಗಳ ದಾಳಿ ಎಂದು ಧೃಡಪಟ್ಟಿದೆ. ಸುಸ್ವಾರ್ ಮತ್ತು ಪನ್ಸೋಲಿ ಗ್ರಾಮಗಳಲ್ಲಿ ದಾಳಿ ನಡೆದಿದ್ದು, ಇಬ್ಬರು ಸೇರಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆಡಳಿತಾಧಿಕಾರಿಗಳು ಮತ್ತು ಅರಣ್ಯ ಇಲಾಖೆ ತಂಡವು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿತು.

ಘಟನೆ ಕುರಿತು ಸಂಸದ ಜಿತಿನ್ ಪ್ರಸಾದ ಅವರು ದೂರವಾಣಿ ಮೂಲಕ ಸ್ಥಳೀಯರೊಂದಿಗೆ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT