ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರಪ್ರದೇಶ | ಗೋಡಂಬಿ ಸಾಗಿಸುತ್ತಿದ್ದ ಟ್ರಕ್‌ ಪಲ್ಟಿ: ಏಳು ಮಂದಿ ಸಾವು

Published : 11 ಸೆಪ್ಟೆಂಬರ್ 2024, 4:32 IST
Last Updated : 11 ಸೆಪ್ಟೆಂಬರ್ 2024, 4:32 IST
ಫಾಲೋ ಮಾಡಿ
Comments

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಇಂದು( ಬುಧವಾರ) ಬೆಳಿಗ್ಗೆ ಗೋಡಂಬಿ ಸಾಗಿಸುತ್ತಿದ್ದ ಮಿನಿ ಟ್ರಕ್‌ವೊಂದು ಅಪಘಾತಕ್ಕೀಡಾದ ಪರಿಣಾಮ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂಧು ಪೊಲೀಸರು ತಿಳಿಸಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ಮಂಡಲದ ಚಿನ್ನೈಗುಡೆಂನ ಚಿಲಕ ಪಾಕಲಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ.

ಟ್ರಕ್ ಪಲ್ಟಿಯಾದ ಪರಿಣಾಮ ಗೋಡಂಬಿ ಚೀಲಗಳ ಅಡಿಯಲ್ಲಿ ಸಿಲುಕಿಕೊಂಡ ಏಳು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಬದುಕುಳಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನರಸಿಂಹ ಕಿಶೋರ್ ಹೇಳಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಗೋಣಿಚೀಲದ ಅಡಿಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಕಿಶೋರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT