ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು | ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: 8 ಮಂದಿ ಸಾವು

Published 9 ಮೇ 2024, 12:29 IST
Last Updated 9 ಮೇ 2024, 12:29 IST
ಅಕ್ಷರ ಗಾತ್ರ

ವಿರುದುನಗರ (ತಮಿಳುನಾಡು): ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಏಳು ಕೋಣೆಗಳಲ್ಲಿ ಸಂಗ್ರಹಿಸಿಟ್ಟಿದ್ದ  ಪಟಾಕಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿಸಿದ್ದಾರೆ.

ಘಟನೆ ವೇಳೆ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಸುಮಾರು 10 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಅಗ್ನಿ ಅವಘಡಕ್ಕೆ ಕಾರಣವೇನೆಂದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟಕವು ಪರವಾನಗಿಯನ್ನು ಪಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಅವಘಡದ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮರ್ಮು, ‘ದುರಂತದ ಬಗ್ಗೆ ತಿಳಿದು ತೀವ್ರ ದುಃಖವಾಗಿತು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ’ ಎಂದು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT