ನಾರಾಯಣಪುರ: ಛತ್ತೀಸಗಢದ ನಾರಾಯಣಪುರ–ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಮಂದಿ ನಕ್ಸಲರು ಹತರಾಗಿದ್ದಾರೆ.

‘ಇಂದ್ರಾವತಿ ಪ್ರದೇಶ ಸಮಿತಿ ಮತ್ತು ಪ್ಲಟೂನ್ ನಂಬರ್ 16 ಸಂಘಟನೆಗಳ ನಕ್ಸಲರ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ಗುರುವಾರ ನಕ್ಸಲ್ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು’ ಎಂದು ನಾರಾಯಣಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

‘ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದ್ದು, ನಕ್ಸಲರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.