ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಕಣಿವೆಗೆ ಬಿದ್ದ ವಾಹನ 8 ಜನ ಸಾವು

Published 9 ಏಪ್ರಿಲ್ 2024, 10:54 IST
Last Updated 9 ಏಪ್ರಿಲ್ 2024, 10:54 IST
ಅಕ್ಷರ ಗಾತ್ರ

ನೈನಿತಾಲ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಮಂಗಳವಾರ ವಾಹನವೊಂದು 150 ಅಡಿ ಆಳದ ಕಣಿವೆಗೆ ಬಿದ್ದು ಏಳು ನೇಪಾಳಿ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.

ಬೆತಲ್ಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ರಾಜ್ಯ ವಿಪತ್ತು ನಿರ್ವಹಣ ತಂಡ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಮೂವರು ಗಾಯಳುಗಳನ್ನು ರಕ್ಷಣೆ ಮಾಡಿ, ಎಂಟು ಮೃತದೇಹಗಳನ್ನು ಹೊರತೆಗೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT