ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ದೋಣಿ ಮಗುಚಿ ಏಳು ಜನರ ಸಾವು

Published 1 ಜೂನ್ 2024, 21:45 IST
Last Updated 1 ಜೂನ್ 2024, 21:45 IST
ಅಕ್ಷರ ಗಾತ್ರ

ಶಿಯೋಪುರ್‌: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸೀಪ್‌ ನದಿಯಲ್ಲಿ ಶನಿವಾರ ದೋಣಿ ಮುಗುಚಿ ಐವರು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. 

‘ಜಿಲ್ಲಾ ಕೇಂದ್ರದಿಂದ 40 ಕಿ.ಮೀ ದೂರದ ಮನ್‌ಪುರದಲ್ಲಿ ಸಂಜೆ 4.30 ಗಂಟೆಗೆ ಈ ದುರಂತ ಸಂಭವಿಸಿದೆ. ದೋಣಿಯಲ್ಲಿ ಒಟ್ಟು 11 ಜನರಿದ್ದರು. ಇದರಲ್ಲಿ ಏಳು ಜನರು ಮೃತಪಟ್ಟಿದ್ದು, ನಾಲ್ವರನ್ನು ರಕ್ಷಿಸಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ್‌ ಆನಂದ್‌ ಮಾಹಿತಿ ನೀಡಿದ್ದಾರೆ.

ಮೃತಪಟ್ಟ ಮಕ್ಕಳು 4ರಿಂದ 15 ವರ್ಷದವರು. ಜತೆಗೆ 35 ವರ್ಷದ ಪುರುಷ ಮತ್ತು 30 ವರ್ಷದ ಮಹಿಳೆಯೊಬ್ಬರು ಅಸುನೀಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT