ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯ ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ತೀವ್ರ ಶೋಧ

Published : 20 ಆಗಸ್ಟ್ 2024, 9:07 IST
Last Updated : 20 ಆಗಸ್ಟ್ 2024, 9:07 IST
ಫಾಲೋ ಮಾಡಿ
Comments

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂಗಲೋಯಿ ಆಸ್ಪತ್ರೆ ಮತ್ತು ಕೇಂದ್ರ ದೆಹಲಿಯ ಚಾಣಕ್ಯ ಪುರಿಯ ಪ್ರೈಮಸ್ ಆಸ್ಪತ್ರೆಯಿಂದ ಮಧ್ಯಾಹ್ನ ಸುಮಾರು ಒಂದು ಗಂಟೆಗೆ ಹೊತ್ತಿಗೆ ಬಾಂಬ್ ಬೆದರಿಕೆ ಕುರಿತು ದೂರು ಲಭಿಸಿರುವುದಾಗಿ ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಪೊಲೀಸರು ಆಸ್ಪತ್ರೆಗಳಿಗೆ ಧಾವಿಸಿದ್ದಾರೆ. ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಹಲವು ಆಸ್ಪತ್ರೆ ಹಾಗೂ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ನಿರಂತರವಾಗಿ ಬರುತ್ತಲೇ ಇವೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೆ ಬಹುತೇಕ ಸಂದರ್ಭಗಳಲ್ಲಿ ಹುಸಿ ಬಾಂಬ್ ಕರೆಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT