ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ | ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ 400ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Published 6 ಮೇ 2024, 5:46 IST
Last Updated 6 ಮೇ 2024, 5:46 IST
ಅಕ್ಷರ ಗಾತ್ರ

ಶಿಲ್ಲಾಂಗ್: ಮೇಘಾಲಯದ ಖಾಸಿ ಜೈನ್ತಿಯಾ ಹಿಲ್ಸ್‌ ಪ್ರದೇಶದಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹಲವು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಸುಮಾರು 400ಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ 48 ಗಂಟೆಗಳ ಕಾಲ ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಮೇಘಾಲಯದ ಖಾಸಿ ಜೈನ್ತಿಯಾ ಹಿಲ್ಸ್‌ ಪ್ರದೇಶದ 13 ಹಳ್ಳಿಗಳಲ್ಲಿ ಸುಮಾರು 427 ಮನೆಗಳು ಹಾನಿಗೊಳಗಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಹಿರಿಯ ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್‌ ಕೆ. ಸಂಗ್ಮಾ, ‘ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಗಾಳಿ, ಮಳೆಯಿಂದಾಗಿ ಅನೇಕ ಮಳೆಗಳಿಗೆ ಹಾನಿಯಾಗಿದೆ. ಸಂತ್ರಸ್ತ ಜನರಿಗೆ ತಕ್ಷಣ ಪರಿಹಾರ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT