ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೈಪುರ | ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್, ತೀವ್ರ ತಪಾಸಣೆ

Published 18 ಆಗಸ್ಟ್ 2024, 9:17 IST
Last Updated 18 ಆಗಸ್ಟ್ 2024, 9:17 IST
ಅಕ್ಷರ ಗಾತ್ರ

ನವದೆಹಲಿ: ಜೈಪುರದ ಸಿಕೆ ಬಿರ್ಲಾ ಆಸ್ಪತ್ರೆ, ಮೊನಿಲೆಕ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಭಾನುವಾರ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ ರೋಗಿಗಳು ಮತ್ತು ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ.

‌ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಗಳಿಗೆ ಇ–ಮೇಲ್‌ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಆಸ್ಪತ್ರೆಗಳ ಬಳಿ ದೌಡಾಯಿಸಿದ್ದಾರೆ.

ಇದುವರೆಗೆ ನಾಲ್ಕು ಆಸ್ಪತ್ರೆಗಳಿಗೆ ಇ–ಮೇಲ್‌ ಮೂಲಕ ಬಾಂಬ್ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜೈಪುರ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ‘ಪಿಟಿಐ’ಗೆ ತಿಳಿಸಿದ್ದಾರೆ.

ಆಸ್ಪತ್ರೆಯ ಹಾಸಿಗೆಗಳ ಕೆಳಗೆ ಮತ್ತು ಸ್ನಾನದ ಕೋಣೆಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ. ಈ ಹತ್ಯಾಕಾಂಡದ ಹಿಂದೆ ಭಯೋತ್ಪಾದಕರು ಇದ್ದಾರೆ ಎಂದು ಇ–ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಹರಿಯಾಣದ ಗುರುಗ್ರಾಮದಲ್ಲಿರುವ ಆಂಬಿಯೆನ್ಸ್ ಮಾಲ್‌ಗೆ ಶನಿವಾರ ಬಾಂಬ್ ಬೆದರಿಕೆ ಬಂದಿತ್ತು. ಇದಾದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದೇ ವರ್ಷ ಮೇ ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಸುಮಾರು 250 ಶಾಲೆಗಳಿಗೆ ಇದೇ ರೀತಿ ಇ–ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಆದರೆ, ತಪಾಸಣೆ ನಡೆಸಿದ ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT