ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಬಸ್‌, ಟ್ರಕ್‌ ನಡುವೆ ಅಪಘಾತ; 12 ಮಂದಿ ಸಜೀವ ದಹನ

Published 28 ಡಿಸೆಂಬರ್ 2023, 2:42 IST
Last Updated 28 ಡಿಸೆಂಬರ್ 2023, 2:42 IST
ಅಕ್ಷರ ಗಾತ್ರ

ಗುಣ: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.

ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ.

ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 16 ಜನ ಗಾಯಗೊಂಡಿದ್ದಾರೆ. 

ಗಾಯಾಳುಗಳನ್ನು ಗುಣ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT