ಕೋಲ್ಕತ್ತ: ಕಚ್ಚಾ ಬಾಂಬ್ಗಳನ್ನು ತಯಾರಿಸುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಸಾಗರಪಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖೊಯೆರ್ತಲಾ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರನ್ನು ಸಕಿರುಲ್ ಸರ್ಕಾರ್ (32), ಮಾಮನ್ ಮೊಲ್ಲಾ (30) ಹಾಗೂ ಮುಸ್ತಾಕಿನ್ ಶೇಖ್ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಅವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಮನ್ ಮನೆಯಲ್ಲಿ ಕಚ್ಚಾ ಬಾಂಬ್ಗಳನ್ನು ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಘಟನಾ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.
.ಕಚ್ಚಾ ಬಾಂಬ್ ಸ್ಫೋಟ: ಮಹಿಳೆ ಸ್ಥಿತಿ ಗಂಭೀರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.