ಸೂರತ್: ಗುಜರಾತ್ನ ಸೂರತ್ನಲ್ಲಿ ಹಝಿರಾ ಕೈಗಾರಿಕಾ ಪ್ರದೇಶದ ಉಕ್ಕಿನ ಕಾರ್ಖಾನೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಸಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಘಟಕದಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹಲೋತ್ ತಿಳಿಸಿದ್ದಾರೆ.

ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಖಾನೆಯ ಒಂದು ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿತು. ಘಟನೆ ಕುರಿತು ಹಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರೆಕ್ಸ್ ಘಟಕದಲ್ಲಿ ಉಪಕರಣ ವೈಫಲ್ಯದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.
.ಅಹಮದಾಬಾದ್ | ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: ವೃದ್ಧೆ ಸಾವು, 22 ಮಂದಿಗೆ ಗಾಯ.ಪ.ಬಂಗಾಳ: ತೈಲ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ವ್ಯಕ್ತಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.