ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಸೇತುವೆ ಕುಸಿದು ಐವರಿಗೆ ಗಾಯ

Published 2 ಏಪ್ರಿಲ್ 2024, 11:18 IST
Last Updated 2 ಏಪ್ರಿಲ್ 2024, 11:18 IST
ಅಕ್ಷರ ಗಾತ್ರ

ಮೊರೈನಾ (ಮಧ್ಯಪ್ರದೇಶ): ಕುವಾರಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿದು, ಐವರು ಕಾರ್ಮಿಕರು ಮಂಗಳವಾರ ಗಾಯಗೊಂಡಿದ್ದಾರೆ. 

ಶತಮಾನದಷ್ಟು ಹಳೆಯದಾದ ರೈಲ್ವೆ ಸೇತುವೆಯನ್ನು ಕಳಚುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ. 

ರೈಲ್ವೆ ಹಳಿಯನ್ನು ನ್ಯಾರೋ ಗೇಜ್‌ನಿಂದ ಬ್ರಾಡ್‌ ಗೇಜ್‌ಗೆ ಪರಿವರ್ತಿಸಲಾಗುತ್ತಿದ್ದು, ಸೇತುವೆಯನ್ನು ಆ ಸಲುವಾಗಿ ಕಳಚುವ ಕಾಮಗಾರಿ ನಡೆಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಗ್ಯಾಸ್‌ ಕಟರ್‌ ಬಳಸಿ ಸೇತುವೆಯ ಉಕ್ಕಿನ ಭಾಗವನ್ನು ತುಂಡರಿಸುವ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದೂ ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT