ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ನಾಲ್ವರು ಕಾರ್ಮಿಕರ ಸಾವು

Published 2 ಏಪ್ರಿಲ್ 2024, 15:52 IST
Last Updated 2 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ಮುಂಬೈ: ಕೂಲಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕವಠೆ ಮಹಾಂಕಾಲ್‌ ಪಟ್ಟಣ ಬಳಿಯ ಮೀರಾಜ್‌– ಪಂಡರಪುರ ರಸ್ತೆಯಲ್ಲಿ ಈ ದುರಂತ ನಡೆದಿದೆ. ಕಬ್ಬು ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್‌ನ ಇಂಜಿನ್‌ಗೆ ಹಾನಿಯಾಗಿದ್ದ ಕಾರಣ ಅದನ್ನು ಸರಿಪಡಿಸಲು ರಸ್ತೆ ಬದಿ ನಿಲ್ಲಿಸಲಾಗಿತ್ತು. ಆ ವೇಳೆ ವೇಗವಾದ ಬಂದ ಟ್ರಕ್‌, ಟ್ರ್ಯಾಕ್ಟರ್‌ನ ಟ್ರಾಲಿಗೆ ಅಪ್ಪಳಿಸಿದ ಪರಿಣಾಮ ಸಾವು–ನೋವು ಸಂಭವಿಸಿದೆ.

ಗಾಯಾಳುಗಳನ್ನು ಮಿರಾಜ್‌ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಕವಟೆ ಮಹಾಂಕಾಲ್‌ನ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT