ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ವಿರುಧ್‌ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
Published 17 ಫೆಬ್ರುವರಿ 2024, 14:58 IST
Last Updated 17 ಫೆಬ್ರುವರಿ 2024, 14:58 IST
ಅಕ್ಷರ ಗಾತ್ರ

ವಿರುಧ್‌ನಗರ, ತಮಿಳುನಾಡು: ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಪುರುಷರು ಇದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ವೆಂಬಾಕೊಟ್ಟೈ ತಾಲ್ಲೂಕಿನ ಕುಂಡಾಯಿರುಪ್ಪು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಏಕಾಏಕಿ ಸ್ಪೋಟ ಸಂಭವಿಸಿತ್ತು.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡು ಸರ್ಕಾರ ಮೃತರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಸ್ಥಳದಲ್ಲಿ ಭಾರಿ ಪ್ರಮಾಣದ ರಸಾಯನಿಕಗಳನ್ನು ಸಂಗ್ರಹಿಸಲಾಗಿದ್ದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT