ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಹೇಳಿಕೆ ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು: ಸೀತಾರಾಂ ಯೆಚೂರಿ

Published 18 ಏಪ್ರಿಲ್ 2024, 6:51 IST
Last Updated 18 ಏಪ್ರಿಲ್ 2024, 6:51 IST
ಅಕ್ಷರ ಗಾತ್ರ

ಕೋಯಿಕೋಡ್‌(ಕೇರಳ): ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆ ನೀಡಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಯೆಚೂರಿ, ‘ರಾಮನ ವಿಚಾರದಲ್ಲಿ ಕೋಮು ಧ್ರುವೀಕರಣ ಸೃಷ್ಟಿಸುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಿದ್ದು, ಮೋದಿ ನೀಡಿರುವ ಹೇಳಿಕೆಗಳನ್ನು ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ಯೆಚೂರಿ ಹೇಳಿದ್ದಾರೆ.

‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಬಂಧಿಸಲ್ಪಟ್ಟ ಮೊದಲ ರಾಜಕೀಯ ನಾಯಕರಲ್ಲಿ ನಾನು ಒಬ್ಬನಾಗಿದ್ದೇನೆ. 370ನೇ ವಿಧಿ ರದ್ದತಿ ನಂತರ ಕಾಶ್ಮೀರದಲ್ಲಿ ರಾಜಕಾರಣಿಗಳ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಪಕ್ಷ ನಮ್ಮದು. ಚುನಾವಣಾ ಬಾಂಡ್‌ ವಿರೋಧಿಸಿ ಮೊದಲು ಧ್ವನಿ ಎತ್ತಿರುವುದು ಕೂಡ ನಾವೇ’ ಎಂದರು .

ಇದೇ ವೇಳೆ ಕಾಂಗ್ರೆಸ್ ಮತ್ತು ಯುಡಿಎಫ್‌ ವಿರುದ್ಧ ವಾಗ್ದಾಳಿ ನಡೆಸಿದ ಯೆಚೂರಿ, ‘ನಮ್ಮ ಪಕ್ಷದ ಅಭ್ಯರ್ಥಿ ಕೆ. ಕೆ. ಶೈಲಜಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದರು.

ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT