ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bharath Bandh | ಬಿಹಾರದಲ್ಲಿ ಲಾಠಿ ಚಾರ್ಜ್‌: ಒಡಿಶಾದಲ್ಲಿ ಸಂಚಾರಕ್ಕೆ ಅಡ್ಡಿ

Published : 21 ಆಗಸ್ಟ್ 2024, 7:23 IST
Last Updated : 21 ಆಗಸ್ಟ್ 2024, 7:23 IST
ಫಾಲೋ ಮಾಡಿ
Comments

ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಹಾರದಲ್ಲಿ ವೇದಿಕೆ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಜನರ ಗುಂಪನ್ನು ಚದುರಿಸಿದ್ದಾರೆ. ಅಲ್ಲದೆ ಪ್ರತಿಭಟನನಿರತರು ಬಿಹಾರದ ಹಲವೆಡೆ ರಸ್ತೆ ತಡೆ ನಡೆಸಿದ್ದು, ಬೃಹತ್‌ ಪ್ರಮಾಣದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಯಿತು. ರಸ್ತೆ ತಡೆದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಒಡಿಶಾದಲ್ಲಿ ಬಂದ್‌ ಬಿಸಿ ಕೊಂಚ ತಟ್ಟಿದ್ದು, ಕೆಲವು ರೈಲು ಮತ್ತು ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಉಳಿದಂತೆ  ಬ್ಯಾಂಕ್‌, ಸರ್ಕಾರಿ ಕಚೇರಿ, ವಾಣಿಜ್ಯ ಮಳಿಗೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಅದಾಗ್ಯೂ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.

ಉಳಿದಂತೆ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್‌, ಉತ್ತರಪ್ರದೇಶ, ದೆಹಲಿ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಸಿಡಿಎಒಆರ್‌) ಸರ್ಕಾರದ ಮುಂದಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT