ಮಿರ್ಜಾಪುರ: ಹೌರಾಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 230 ಆಮೆಗಳನ್ನು ರಕ್ಷಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಜೋಧಪುರ –ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಆಮೆಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಆಧಾರದ ಮೇಲೆ ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ತಪಾಸಣೆ ವೇಳೆ ರಾಕೇಶ್ (28) ಎಂಬ ಯುವಕ ಹಾಗೂ ಲಾಖೊ(40) ಎನ್ನುವ ಮಹಿಳೆ ಸೆರೆಸಿಕ್ಕಿದ್ದು ಅವರನ್ನು ಬಂಧಿಸಿದ್ದಾರೆ.
ಇಬ್ಬರೂ ಕೂಡ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದರು.12 ಬ್ಯಾಗ್‌ಗಳಲ್ಲಿ ಒಟ್ಟು 230 ಆಮೆಗಳಿದ್ದವು. ವಿಚಾರಣೆ ವೇಳೆ ಪಶ್ಚಿಮ ಬಂಗಾಳಕ್ಕೆ ಆಮೆಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ಇಬ್ಬರನ್ನೂ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.