ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ ರೈಲು ಅಪ‍ಘಾತ: 12 ರೈಲುಗಳ ಸಂಚಾರ ರದ್ದು

Published 30 ಅಕ್ಟೋಬರ್ 2023, 2:15 IST
Last Updated 30 ಅಕ್ಟೋಬರ್ 2023, 2:15 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯ ಮುಂದಿವರಿದ ಕಾರಣ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, 15 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕರು ಆ ಪ್ರದೇಶದಲ್ಲಿ ಸಿಕ್ಕಿಹಾಕಿಕೊಳ್ಳದಂತೆ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಹಳಿಗಳನ್ನು ಭಾಗಶಃ ಸರಿಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕರ ರೈಲಿಗೆ ವಿಶಾಖಪಟ್ಟಣ–ಪಲಾಸ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT