ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಶಾಖಾಘಾತದ ಲಕ್ಷಣದಿಂದ 10 ಮಂದಿ ಸಾವು

Published 31 ಮೇ 2024, 4:27 IST
Last Updated 31 ಮೇ 2024, 4:27 IST
ಅಕ್ಷರ ಗಾತ್ರ

ರೂರ್ಕೆಲಾ: ಒಡಿಶಾದಲ್ಲಿ ತಾಪಮಾನ ಹೆಚ್ಚಳವಾಗಿದ್ದು ರೂರ್ಕೆಲಾದಲ್ಲಿ ಶಾಖಾಘಾತದ ಲಕ್ಷಣಗಳಿಂದ 10 ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ 2 ಗಂಟೆಯಿಂದ ಆರು ಗಂಟೆಗಳ ಅವಧಿಯಲ್ಲಿ ಸಾವು ಸಂಭವಿಸಿದೆ ಎಂದು ರೂರ್ಕೆಲಾ ಸರ್ಕಾರಿ ಆಸ್ಪತ್ರೆಯ ಪ್ರಭಾರ ನಿರ್ದೇಶಕಿ (ಡಿಐಸಿ) ಡಾ| ಸುಧಾರಾಣಿ ಪ್ರಧಾನ್ ಅವರು ಹೇಳಿದ್ದಾರೆ.

‘ಆಸ್ಪತ್ರೆಗೆ ತಲುಪುವಷ್ಟರಲ್ಲಿ ಎಂಟು ಜನರು ಸಾವನ್ನಪ್ಪಿದ್ದರು, ಉಳಿದವರು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬಂದಾಗ ಅವರ ದೇಹದ ಉಷ್ಣತೆಯು ಸುಮಾರು 103-104 ಡಿಗ್ರಿ ಫ್ಯಾರನ್‌ಹೀಟ್ ಆಗಿತ್ತು. ಇದು ತೀವ್ರವಾದ ಶಾಖದ ಅಲೆಯಿಂದಾಗಿ ಸಂಭವಿಸಿರುವ ಸಾಧ್ಯತೆ ಇದೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ ನಾಲ್ವರು ಸಾವು

ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಬಿಸಿಗಾಳಿ-ಸಂಬಂಧಿತ ರೋಗಲಕ್ಷಣಗಳಿಂದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ಗುರುವಾರ ರಾಜ್ಯದಲ್ಲಿ ಗರಿಷ್ಠ ತಾಪಮಾನ 47.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT