ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿ ತೀವ್ರಗೊಂಡಿದ್ದು, ಹೊಸ ವರ್ಷದ ಮೊದಲ ದಿನವೇ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ ವರದಿಯಾಗಿದೆ. ಶುಕ್ರವಾರ ತಾಪಮಾನ 1.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಭಾರಿ ಹೊಂಜು (ಫಾಗ್) ಆವರಿಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

2006ರ ಜನವರಿ 8ರಂದು ದೆಹಲಿಯಲ್ಲಿ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈವರೆಗಿನ ಅತಿ ಕನಿಷ್ಠ ತಾಪಮಾನ 0.6 ಡಿಗ್ರಿ ಸೆಲ್ಸಿಯಸ್ 1935ರ ಜನವರಿಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ:ಹೊಸ ವರ್ಷದ ದಿನ: ಕೊರೆವ ಚಳಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಕಳೆದ ವರ್ಷ 2.4 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ತಾಪಮಾನ ವರದಿಯಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬೆಳಿಗ್ಗೆ 6 ಗಂಟೆ ವೇಳೆಗೆ ಸಫ್ದರ್‌ಜಂಗ್ ಮತ್ತು ಪಾಲಂನಲ್ಲಿ ದಟ್ಟ ಹೊಂಜು ಆವರಿಸಿದ್ದು, ಶೂನ್ಯದಿಂದ 50 ಮೀಟರ್ ಗೋಚರತೆ (ಝೀರೊ ವಿಸಿಬಿಲಿಟಿ) ಇತ್ತು ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ.

ಜನವರಿ 2ರಿಂದ 6ರ ಅವಧಿಯಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಜನವರಿ 4–5ರ ವೇಳೆಗೆ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದೂ ಅವರು ಹೇಳಿದ್ದಾರೆ.

ಜನವರಿ 3–5ರ ಮಧ್ಯೆ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.