ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆಟೊ ಚಾಲಕನಿಗೆ 10 ವರ್ಷ ಜೈಲು

Published 4 ಫೆಬ್ರುವರಿ 2024, 12:37 IST
Last Updated 4 ಫೆಬ್ರುವರಿ 2024, 12:37 IST
ಅಕ್ಷರ ಗಾತ್ರ

ಥಾಣೆ (ಮಹಾರಾಷ್ಟ್ರ): 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಥಾಣೆಯ ವಿಶೇಷ ಪೋಕ್ಸೊ ನ್ಯಾಯಾಲಯ, 10 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಆದೇಶಿಸಿದೆ. ನ್ಯಾಯಾಧೀಶ ಡಿ.ಎಸ್.ದೇಶಮುಖ್ ಅವರು ತೀರ್ಪು ಪ್ರಕಟಿಸಿದ್ದಾರೆ.

ಘಟನೆ ವಿವರ: ಅಪರಾಧಿ ರಾಜೇಶ್ ಸಿಂಗ್ ಆಟೊ ಚಾಲಕನಾಗಿದ್ದ. ರಾಜೇಶ್ ಸಿಂಗ್ ಹಾಗೂ ಬಾಲಕಿ ತಂದೆ ಅಂಬಿಕಾ ಸಿಂಗ್ ಯಾದವ್ ಇಬ್ಬರು ಸ್ನೇಹಿತನಾಗಿದ್ದರು. 2018ರ ನವೆಂಬರ್‌ 18ರಂದು ಸಿಂಗ್‌ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಸಂತ್ರಸ್ತೆಯು ಕುಟುಂಬದ ಬಳಿ ತನ್ನ ನೋವನ್ನು ವ್ಯಕ್ತಪಡಿಸಿದ್ದಳು. ಬಳಿಕ ಕುಟುಂಬಸ್ಥರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು.

ಸಂತ್ರಸ್ತೆಯ ತಾಯಿ ಸೇರಿ ಒಂಬತ್ತು ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿವೇಕ್ ಕಾಡು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT