ನವದೆಹಲಿ: ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಪ್ರೌಢಾವಸ್ಥೆಗೆ ತಲುಪಿದಾಗ ಆಗುವ ದೈಹಿಕ ಬದಲಾವಣೆಗಳ ಬಗ್ಗೆ ಹದಿಹರೆಯದವರಿಗೆ ಅರಿವು ಮೂಡಿಸಲು ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣವು ಪಠ್ಯಕ್ರಮದ ಭಾಗವಾಗಿರಬೇಕು’ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರ ಪೀಠ ಹೇಳಿದೆ.

‘ಮಕ್ಕಳಿಗೆ ಒಂಬತ್ತನೇ ತರಗತಿಯಿಂದ ಅಲ್ಲ, ಅದಕ್ಕೂ ಮುನ್ನವೇ ಲೈಂಗಿಕ ಶಿಕ್ಷಣ ನೀಡಬೇಕು ಎಂದು ನಾವು ಆಭಿಪ್ರಾಯಪಟ್ಟಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮಹರಿಸಿ ಅಗತ್ಯ ಕ್ರಮ ವಹಿಸಬೇಕು. ಪ್ರೌಢಾವಸ್ಥೆಯ ನಂತರ ದೇಹದಲ್ಲಿ ಆಗುವ ಬದಲಾವಣೆಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕಾಳಜಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಬೇಕು’ ಎಂದು ತಿಳಿಸಿದೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ 15 ವರ್ಷದ ಬಾಲಕನಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.