ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ: ಶಿಕ್ಷೆ ರದ್ದತಿ ಕೋರಿ ಮಾಜಿ ಡಿಜಿಪಿ ಸಲ್ಲಿಸಿದ್ದ ಅರ್ಜಿ ವಜಾ

Published 23 ಏಪ್ರಿಲ್ 2024, 14:48 IST
Last Updated 23 ಏಪ್ರಿಲ್ 2024, 14:48 IST
ಅಕ್ಷರ ಗಾತ್ರ

ಚೆನ್ನೈ: ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ತಮಿಳುನಾಡಿನ ಮಾಜಿ ವಿಶೇಷ ಡಿಜಿಪಿ ರಾಜೇಶ್‌ ದಾಸ್‌ ಎಂಬುವವರಿಗೆ ವಿಧಿಸಲಾಗಿರುವ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಪಡಿಸಲು ಮದ್ರಾಸ್‌ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಮಹಿಳೆಯರು, ಬಾಲಕಿಯರ ಮೇಲಿನ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಶಿಕ್ಷೆ ರದ್ದುಗೊಳಿಸುವಂತೆ ಕೋರಿ ದಾಸ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ಧಂಡಪಾಣಿ ಅವರು ತಿರಸ್ಕರಿಸಿದರು. ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವುದರಿಂದಲೂ ವಿನಾಯತಿ ನೀಡಬೇಕು ಎಂದು ದಾಸ್‌ ಕೋರಿದ್ದರು. ನ್ಯಾಯಮೂರ್ತಿಗಳು ಅದನ್ನೂ ನಿರಾಕರಿಸಿದರು. 

ಮಹಿಳಾ ಐಪಿಎಸ್‌ ಅಧಿಕಾರಿಗೆ 2021ರಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ದಾಸ್‌ ಅವರ ಅಪರಾಧ ಸಾಬೀತುಪಡಿಸಿದ್ದ ವಿಳ್ಳುಪುರಂ ಸ್ಥಳೀಯ ನ್ಯಾಯಾಲಯವು ಅವರಿಗೆ 2023ರ ಜೂನ್‌ನಲ್ಲಿ ಮೂರು ವರ್ಷಗಳ ಕಠಿಣ ಸಜೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಅವರು ಕ್ರಿಮಿನಲ್‌ ಮಿಸೆಲೇನಿಯಸ್‌ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT