ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಗವರ್ನರ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ; 12 SFI ಕಾರ್ಯಕರ್ತರ ಬಂಧನ

Published 20 ಫೆಬ್ರುವರಿ 2024, 14:14 IST
Last Updated 20 ಫೆಬ್ರುವರಿ 2024, 14:14 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ ಆರೋಪದಡಿಯಲ್ಲಿ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಫ್‌ಎಫ್‌ಐ) ಕನಿಷ್ಠ 12 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಕೇರಳ ರಾಜ್ಯಪಾಲರ ಬೆಂಗಾವಲು ಪಡೆ ಕೊಲ್ಲಂ ಜಿಲ್ಲೆಯಿಂದ ರಾಜಧಾನಿ ತಿರುವನಂತಪುರಕ್ಕೆ ಸಂಚರಿಸುತ್ತಿದ್ದಾಗ ಮಂಗಳಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನಲ್ಲಿ ರಾಜ್ಯಪಾಲ ಆರಿಫ್ ವಿರುದ್ಧ ಎಸ್‌ಎಫ್‌ಐ ಕಾರ್ಯಕರ್ತರು ಸೋಮವಾರ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಇದರಿಂದ ಕುಪಿತಗೊಂಡ ಆರಿಫ್ ತಮ್ಮ ಕಾರಿನಿಂದ ಇಳಿದು ಪ್ರತಿಭಟನಾಕಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಉನ್ನತ ಶಿಕ್ಷಣ ಕ್ಷೇತ್ರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕೇಸರಿಮಯಗೊಳಿಸಿದ್ದಾರೆ ಎಂದು ಆರೋಪಿಸಿ ಎಸ್‌ಎಫ್‌ಐ ಸಂಘಟನೆ, 'ಗೋ ಬ್ಯಾಕ್' ಘೋಷಣೆಯೊಂದಿಗೆ ರಾಜ್ಯಪಾಲರ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT