ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಯಲ್ಲಿ ಹಿಂಸಾಚಾರ: SFI ಕಾರ್ಯಕರ್ತರ ಬಂಧನ

ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್ಎಫ್ಐ)
Published 6 ಡಿಸೆಂಬರ್ 2023, 13:11 IST
Last Updated 6 ಡಿಸೆಂಬರ್ 2023, 13:11 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉನ್ನತ ಶಿಕ್ಷಣ ಕ್ಷೇತ್ರವನ್ನು ಕೇಸರಿಮಯಗೊಳಿಸಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್ಎಫ್ಐ) ಕಾರ್ಯಕರ್ತರು ಬುಧವಾರ ರಾಜಭವನಕ್ಕೆ ನಡೆಸಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದೆ.

ರಾಜ್ಯಪಾಲರು ಕೈಗೊಂಡಿರುವ ಕ್ರಮಗಳ ವಿರುದ್ಧ ಎಡಪಕ್ಷವು ರಾಜ್ಯಾದ್ಯಂತ ಶೈಕ್ಷಣಿಕ ಮುಷ್ಕರವನ್ನು ಘೋಷಿಸಿದ್ದು, ಇದರ ಅಂಗವಾಗಿ ಎಸ್‌ಎಫ್ಐ ರಾಜಭವನಕ್ಕೆ ಮೆರವಣಿಗೆ ನಡೆಸಿತ್ತು. ಹೆಚ್ಚಿನ ಸಂಖ್ಯೆಯಲ್ಲಿದ್ದ ಎಸ್‌ಎಫ್‌ಐ ಕಾರ್ಯಕರ್ತರು ರಾಜಭವನ ರಸ್ತೆಯಲ್ಲಿ ಹಾಕಲಾಗಿದ್ದ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಿದ್ದರು.

ಪೊಲೀಸರು ಎಷ್ಟೇ ತಡೆಯಲು ಪ್ರಯತ್ನಿಸಿದರೂ, ಕೆಲವು ಪ್ರತಿಭಟನಾಕಾರರು ರಾಜಭವನದ ಮುಖ್ಯ ದ್ವಾರದ ಬಳಿ ಬಂದು ರಾಜ್ಯಪಾಲ ಖಾನ್‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯು ಹಿಂಸಾರೂಪ ಪಡೆಯುತ್ತಿರುವಂತೆಯೇ ಪೊಲೀಸರು ಗುಂಪನ್ನು ಚದುರಿಸಲು ಜಲಫಿರಂಗಿ ಬಳಸಿದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಿ ಆ ಪ್ರದೇಶದಿಂದ ಅವರನ್ನು ಕರೆದೊಯ್ಯಲಾಯಿತು.

ರಾಜ್ಯಾದ್ಯಂತವೂ ವಿವಿಧ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಎಸ್‌ಎಫ್‌ಐ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT