ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಎಸ್‌ಪಿ ಸಂಸದ ಶಫಿಕುರ್ ರಹಮಾನ್ ಬರ್ಕ್ ನಿಧನ

Published 27 ಫೆಬ್ರುವರಿ 2024, 10:51 IST
Last Updated 27 ಫೆಬ್ರುವರಿ 2024, 10:51 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಶಫಿಕುರ್ ರಹಮಾನ್ ಬರ್ಕ್ ಅವರು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. 

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ರಹಮಾನ್ ಬರ್ಕ್ ಅವರು ಸಂಭಾಲ್‌ ಕ್ಷೇತ್ರದ ಸಂಸದರಾಗಿದ್ದರು. ಅವರ ಮೊಮ್ಮಗ ಜಿಯಾ ರಹಮಾನ್ ಬರ್ಕ್ ಕುಂದರ್ಕಿ ವಿಧಾನಸಭೆ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕರಾಗಿದ್ದಾರೆ.

ರಹಮಾನ್ ಬರ್ಕ್ ಅವರು ತಮ್ಮ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಮೊರಾದಾಬಾದ್‌ನಿಂದ ಮೂರು ಬಾರಿ ಹಾಗೂ ಸಂಭಾಲ್‌ ಲೋಕಸಭೆ ಕ್ಷೇತ್ರದಿಂದ ಎರಡು ಸಲ ಸಂಸದರಾಗಿದ್ದರು. 

ರಹಮಾನ್ ಬರ್ಕ್ ನಿಧನಕ್ಕೆ ಸಮಾಜವಾದಿ ಪಕ್ಷದ ಮುಖಂಡರು ಹಾಗೂ ಇತರೆ ರಾಜಕೀಯ ‍ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT