ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

370ನೇ ವಿಧಿ: ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಅಮಿತ್‌ ಶಾ

Published 12 ಏಪ್ರಿಲ್ 2024, 15:26 IST
Last Updated 12 ಏಪ್ರಿಲ್ 2024, 15:26 IST
ಅಕ್ಷರ ಗಾತ್ರ

ಮೊರಾದಾಬಾದ್‌: ಕಾಶ್ಮೀರ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವ ಅಮಿತ್‌ ಶಾ ಅವರು, ‘370ನೇ ವಿಧಿಯನ್ನು ಆ ಪಕ್ಷವು ದಶಕಗಳ ಕಾಲ ಮಡಿಲಲ್ಲಿರಿಸಿ ಮಗುವಿನಂತೆ ಮುದ್ದು ಮಾಡಿದೆ’ ಎಂದು ಶುಕ್ರವಾರ ಇಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೇರೆ ರಾಜ್ಯಗಳಲ್ಲಿ ಚುನಾವಣಾ ರ್‍ಯಾಲಿಗಳನ್ನುದ್ದೇಶಿಸಿ ಮಾತನಾಡುವಾಗ ಜಮ್ಮ ಮತ್ತು ಕಾಶ್ಮೀರದ ವಿಚಾರಗಳನ್ನು ಪ್ರಸ್ತಾಪಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಚೆಗೆ ನೀಡಿದ್ದ ಸಲಹೆಗೆ ಪ್ರತಿಕ್ರಿಯಿಸಿದ ಶಾ ಅವರು, ‘ಉತ್ತರ ಪ್ರದೇಶ ಮತ್ತು ರಾಜಸ್ಥಾನದವರು ಕಾಶ್ಮೀರದ ಜೊತೆ ಏನು ಸಂಬಂಧ ಹೊಂದಿದ್ದಾರೆ ಎಂದು ಖರ್ಗೆ ಅವರು ಕೇಳುತ್ತಿದ್ದಾರೆ. ಕಾಶ್ಮೀರ ನಮ್ಮದಲ್ಲವೇ’ ಎಂದು ಪ್ರಶ್ನಿಸಿದರು.

ಮೊರಾದಾಬಾದ್‌ನ ಪ್ರತಿ ಮಗುವೂ ಕಾಶ್ಮೀರಕ್ಕಾಗಿ ಜೀವ ನೀಡಲು ಸಿದ್ಧವಿದೆ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT