ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮನೂರು ಶಿವಶಂಕರಪ್ಪ ಮಾತಿಗೆ ಸಹಮತ: ಯಡಿಯೂರಪ್ಪ

Published 1 ಅಕ್ಟೋಬರ್ 2023, 17:04 IST
Last Updated 1 ಅಕ್ಟೋಬರ್ 2023, 17:04 IST
ಅಕ್ಷರ ಗಾತ್ರ

ನವದೆಹಲಿ :‘ರಾಜ್ಯ ಕಾಂಗ್ರೆಸ್‌ ಸರ್ಕಾರವು ಲಿಂಗಾಯತ-ವೀರಶೈವ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ’ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

‘ಶಾಮನೂರು ಅವರು ಹೇಳಿದ್ದು ಸಂಪೂರ್ಣವಾಗಿ ಸರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿಲ್ಲ. ಕೆಲವು ಸಮುದಾಯಗಳಿಗೆ ಸೇರಿದ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ. ಇದು ಈ ಸರ್ಕಾರದ ವಾಸ್ತವ’ ಎಂದು ಯಡಿಯೂರಪ್ಪ ತಿಳಿಸಿದರು.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ಯಡಿಯೂರಪ್ಪ ಭಾನುವಾರ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ-ವೀರಶೈವ ಸಮುದಾಯದ ಎಲ್ಲಾ ನಾಯಕರು ಒಟ್ಟಿಗೆ ನ್ಯಾಯಕ್ಕಾಗಿ ಹೋರಾಡುವ ಸಮಯ ಬಂದಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT