ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರಲು ಶರದ್ ಪವಾರ್‌ ನಿರ್ಧಾರ

Published 17 ಜನವರಿ 2024, 4:45 IST
Last Updated 17 ಜನವರಿ 2024, 4:45 IST
ಅಕ್ಷರ ಗಾತ್ರ

ಮುಂಬೈ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದಿರಲು ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್‌ ಪವಾರ್‌ ನಿರ್ಧರಿಸಿದ್ದಾರೆ.

ಈ ಕುರಿತಂತೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರ ಬರೆದಿರುವ ಪವಾರ್, ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನಂತರ ಬಿಡುವು ಮಾಡಿಕೊಂಡು ಅಯೋಧ್ಯೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿ ಶರದ್ ಪವಾರ್‌ ಅವರಿಗೆ ಟ್ರಸ್ಟ್‌ ಆಮಂತ್ರಣ ಪತ್ರ ನೀಡಿತ್ತು.

ಈ ಸಮಾರಂಭದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಕೂಡ ನಿರ್ಧರಿಸಿದ್ದು, ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿರುವುದಾಗಿ ತಿಳಿಸಿತ್ತು. ಅಲ್ಲದೇ ಈ ಕಾರ್ಯಕ್ರಮವನ್ನು ಆರ್‌ಎಸ್ಎಸ್‌ ಮತ್ತು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿತ್ತು.

ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್‌, ಸಿಪಿಎಂ ಈಗಾಗಲೇ ಕಾರ್ಯಕ್ರದಲ್ಲಿ ಭಾಗಿಯಾಗದೇ ಇರಲು ನಿರ್ಧರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT