ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ.

ಶರದ್ ಪವಾರ್ ಬಣವು ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿದರೂ ಅದರ ವಿಚಾರಣೆಗೂ ಮುನ್ನ ನಮ್ಮ ವಾದ ಆಲಿಸಬೇಕೆಂದು ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದೆ.

ಫೆಬ್ರುವರಿ 6 ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದು ಘೋಷಿಸಿತ್ತು. ಆ ಮೂಲಕ, ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು.

ಅಜಿತ್ ಪವಾರ್ ಅವರ ಎನ್‌ಸಿಪಿಗೆ ಚುನಾವಣಾ ಆಯೋಗವು ಗಡಿಯಾರದ ಚಿಹ್ನೆ ನೀಡಿದೆ.

ಪಕ್ಷದ ಸಂವಿಧಾನದ ಗುರಿ, ಉದ್ದೇಶ ಮತ್ತು ಶಾಸಕರ ಸಂಖ್ಯೆಯನ್ನು ಆಧರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆಯೋಗ ತಿಳಿಸಿತ್ತು.

ಕಳೆದ ವರ್ಷದ ಜುಲೈನಲ್ಲಿ ಎನ್‌ಸಿಪಿ ಇಬ್ಭಾಗವಾಗಿತ್ತು. ಅಜಿತ್ ಪವಾರ್ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಶಾಸಕರು ಏಕನಾಥ ಶಿಂದೆ ನೇತೃತ್ವದ ಬಿಜೆಪಿ–ಶಿವಸೇನಾ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದರು. ಆ ಬಳಿಕ ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣಗಳ ನಡುವೆ ನಿರಂತರ ವಾಕ್ಸಮರ ನಡೆದಿತ್ತು.
.ಮಹಾರಾಷ್ಟ್ರ | ಶರದ್ ಪವಾರ್ ಬಣಕ್ಕೆ ಹೊಸ ಹೆಸರು ‘ಎನ್‌ಸಿಪಿ-ಶರದ್ಚಂದ್ರ ಪವಾರ್’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.