ಪುಣೆ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದನ್ನು ರಾಜಕೀಯಗೊಳಿಸಬಾರದು ಎಂದು ಅಜಿತ್ ಅವರ ದೊಡ್ಡಪ್ಪ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಮನವಿ ಮಾಡಿದರು.

ಈ ಮೂಲಕ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

‘ಅಜಿತ್ ಸಾವು ಮಹಾರಾಷ್ಟ್ರಕ್ಕೆ ದೊಡ್ಡ ಆಘಾತ ತರಿಸಿದೆ. ಕಠಿಣ ಪರಿಶ್ರಮಿ, ದಕ್ಷ ನಾಯಕನನ್ನು ರಾಜ್ಯ ಕಳೆದುಕೊಂಡಿದ್ದು, ತುಂಬಲಾರದ ನಷ್ವವಾಗಿದೆ. ಎಲ್ಲವೂ ನಮ್ಮ ಕೈಯಲ್ಲಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಇದೊಂದು ಅಪಘಾತ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅನಗತ್ಯವಾಗಿ ರಾಜಕೀಯ ತರಬೇಡಿ ಎಂದು ನಾನು ಮಮತಾ ಅವರಲ್ಲಿ ವಿನಂತಿಸುತ್ತೇನೆ’ ಎಂದು ಅವರು ಪ್ರತಿಕ್ರಿಯಿಸಿದರು.

‘ಬಹುತೇಕ ಸಂಸ್ಥೆಗಳು ಪೂರ್ಣವಾಗಿ ರಾಜಿ ಮಾಡಿಕೊಂಡಿರುವ ಕಾರಣ, ಅಜಿತ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದು ಮಮತಾ ಪ್ರತಿಪಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.