ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪವಾರ್ ಹೇಳಿಕೆಯು ವಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಉಂಟು ಮಾಡುವುದಿಲ್ಲ: ರಾವುತ್

Last Updated 8 ಏಪ್ರಿಲ್ 2023, 10:10 IST
ಅಕ್ಷರ ಗಾತ್ರ

ಮುಂಬೈ: ಅದಾನಿ ಸಮೂಹದ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್‌ ಒಲವು ತೋರದಿರುವುದು ವಿಪಕ್ಷಗಳ ಒಗ್ಗಟ್ಟಿನಲ್ಲಿ ಯಾವುದೇ ಬಿರುಕು ಉಂಟು ಮಾಡುವುದಿಲ್ಲ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಅದಾನಿಗೆ ಶರದ್ ಪವಾರ್ ಕ್ಲೀನ್ ಚಿಟ್ ನೀಡಿಲ್ಲ. ಆದರೆ ತನಿಖೆ ಹೇಗೆ ನೆಡಸಬೇಕು ಎಂಬುದರ ಆಯ್ಕೆಗಳ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಅದಾನಿ ವಿಷಯದಲ್ಲಿ ಜೆಪಿಸಿ ತನಿಖೆ ಬೇಡಿಕೆಯಲ್ಲಿ ವಿರೋಧ ಪಕ್ಷಗಳು ಅಚಲವಾಗಿವೆ ಎಂದು ರಾವುತ್ ಹೇಳಿದರು.

ಶರದ್ ಪವಾರ್ ಅಥವಾ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ವಿಭಿನ್ನ ನಿಲುವು ಇರಬಹುದು. ಆದರೆ ಇದರಿಂದ ಮಹಾರಾಷ್ಟ್ರ ಅಥವಾ ದೇಶದಲ್ಲಿ ವಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಉಂಟು ಮಾಡುವುದಿಲ್ಲ ಎಂದು ಹೇಳಿದರು.

ಸುದ್ದಿಸಂಸ್ಥೆ 'ಎನ್‌ಡಿಟಿವಿ'ಗೆ ನೀಡಿದ ಸಂದರ್ಶನದಲ್ಲಿ ಅದಾನಿ ಸಮೂಹದ ಬಗ್ಗೆ ಹಿಂಡನ್‌ಬರ್ಗ್ ಸಂಶೋಧನಾ ವರದಿಯನ್ನು ಪವಾರ್ ಟೀಕೆ ಮಾಡಿದ್ದರು.

ಜೆಪಿಸಿಯಲ್ಲಿ ಆಡಳಿತ ಪಕ್ಷಕ್ಕೆ ಬಹುಮತ ಇರುವುದರಿಂದ ಸುಪ್ರೀಂ ಕೋರ್ಟ್ ಮೇಲ್ನೋಟದಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಪವಾರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT