ಕೊಚ್ಚಿ: ಏರ್ ಇಂಡಿಯಾ ವಿಮಾನದಲ್ಲಿ ಉಂಟಾದ ತೀಕ್ಷ್ಣ ಮತ್ತು ಸುಟ್ಟ ವಾಸನೆಯ ಕಾರಣ ದುಬೈನ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊಚ್ಚಿಗೆ ವಾಪಾಸ್ ಆಗಿದೆ.

175 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ಎಕ್ಸ್ಪ್ರೆಸ್ (IX 411) ವಿಮಾನವು ಆಗಸ್ಟ್ 2 ರಂದು ರಾತ್ರಿ ಕೊಚ್ಚಿಯಿಂದ ಟೇಕ್ ಆಫ್ ಆಗಿತ್ತು. ಈ ವೇಳೆ ಪ್ರಯಾಣಿಕರು ಸುಟ್ಟ ವಾಸನೆ ಬರುತ್ತಿದೆ ಎಂದು ದೂರಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಂದು ಲ್ಯಾಂಡ್ ಮಾಡಲಾಗಿತ್ತು.

ಎಂಜಿನಿಯರ್ ತಂಡವು ವಿಮಾನವನ್ನು ಪರಿಶೀಲಿಸಿದ್ದು, ಧೂಮಪಾನ ಮಾಡಿದ ಅಥವಾ ತಾಂತ್ರಿಕ ಸಮಸ್ಯೆಯಾದ ಬಗ್ಗೆ ಯಾವುದೇ ಕುರುಹು ಕಂಡುಬಂದಿಲ್ಲ.

ಪ್ರಯಾಣಿಕರು ತಂದ ಈರುಳ್ಳಿ ಅಥವಾ ತರಕಾರಿಗಳಿಂದ ಬಂದ ವಾಸನೆಯು ಪ್ರಯಾಣಿಕರಲ್ಲಿ ಗೊಂದಲ ಮೂಡಿಸಿತು ಎಂದು ಪ್ರಾಥಮಿಕ ಪರೀಕ್ಷೆಯಲ್ಲಿ ಕಂಡುಬಂದಿದೆ ಎಂದು ಮೂಲಗಳು ಹೇಳಿವೆ.

ಅನಾನುಕೂಲತೆಗೆ ಏರ್ ಇಂಡಿಯಾ ವಿಮಾನ ವಿಷಾದ ವ್ಯಕ್ತಪಡಿಸಿದ್ದು, ಪ್ರಯಾಣಿಕರಿಗೆ ಆಗಸ್ಟ್ 3 ರಂದು ಬೆಳಗಿನ ಜಾವ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.

ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳು ಪ್ರಯಾಣಿಕರನ್ನು ಮಾತ್ರವಲ್ಲದೆ ತರಕಾರಿ, ಹಣ್ಣು, ಹೂವು ಸೇರಿದಂತೆ ಬೃಹತ್ ಪ್ರಮಾಣದ ಸರಕುಗಳನ್ನೂ ಹೊತ್ತೊಯ್ಯುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.