ನವದೆಹಲಿ: ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರು ಇಂದು (ಶುಕ್ರವಾರ) ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಮುಂಬರುವ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿಗೆ ಈ ಭೇಟಿ ಪುಷ್ಟಿ ನೀಡಿದೆ.

ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶರ್ಮಿಳಾ, 'ಇದು ಆಂಧ್ರಪ್ರದೇಶದ ರಾಜಕೀಯ ವಿದ್ಯಮಾನಗಳ ಕುರಿತು ನಡೆದ ಸಾಮಾನ್ಯ ಸಭೆಯಷ್ಟೇ' ಎಂದು ಹೇಳಿದ್ದಾರೆ. ಆದರೆ, ತಮಗೆ ಮೇಲ್ಮನೆ (ರಾಜ್ಯಸಭೆ) ಟಿಕೆಟ್ ಪಡೆಯುವ ಆಸಕ್ತಿ ಇರುವುದನ್ನು ಅವರು ನಿರಾಕರಿಸಿಲ್ಲ.
.ಗಿಗ್ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಸಾಮಾಜಿಕ ಭದ್ರತಾ ಯೋಜನೆ.ಮೋದಿಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ: ರಾಹುಲ್ ಗಾಂಧಿ ಆರೋಪ.
ರಾಜ್ಯಸಭೆ ನಾಮನಿರ್ದೇಶನದ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಯಾರಿಗೆ ಏನು ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರಿಗೆ ಚೆನ್ನಾಗಿ ತಿಳಿದಿದೆ' ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಆಂತರಿಕ ಚರ್ಚೆಗಳ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಶರ್ಮಿಳಾ ಅವರು ಕಳೆದ ಕೆಲವು ಸಮಯದಿಂದ ರಾಜ್ಯಸಭೆ ಸೀಟಿಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 2024 ಜನವರಿಯಲ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದಾಗ ಅವರಿಗೆ ರಾಜ್ಯಸಭೆ ಸ್ಥಾನದ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಪ್ರಸ್ತುತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಯಾವುದೇ ಸ್ಥಾನವನ್ನು ಗೆಲ್ಲುವ ಪರಿಸ್ಥಿತಿಯಲ್ಲಿಲ್ಲ.
.ಸಿಜೆಪಿ ‘ಎಕ್ಸ್’ ಖಾತೆ ಮೇಲಿನ ನಿರ್ಬಂಧ ತೆರವಿಗೆ ದೆಹಲಿ ಹೈಕೋರ್ಟ್ ನಕಾರ.ಸುಗಮ ಅಧಿಕಾರ ಹಸ್ತಾಂತರಕ್ಕೆ ಸಹಕರಿಸಿದ ಸಿದ್ದರಾಮಯ್ಯ ಬಗ್ಗೆ ಹೈಕಮಾಂಡ್ ಮೆಚ್ಚುಗೆ.
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೊಂದಿರುವ ಸಂಖ್ಯಾ ಬಲದ ಆಧಾರದ ಮೇಲೆ, ಚುನಾವಣೆ ನಡೆಯಲಿರುವ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಪಕ್ಷವು ಸುಲಭವಾಗಿ ಗೆಲುವು ಸಾಧಿಸಬಹುದಾಗಿದೆ. ಹೀಗಾಗಿ ಶರ್ಮಿಳಾ ಅವರಿಗೆ ಕರ್ನಾಟಕದಿಂದಲೇ ಟಿಕೆಟ್ ನೀಡಲು ಹೈಕಮಾಂಡ್ ಒಲವು ತೋರಬಹುದು ಎಂಬ ವಿಶ್ವಾಸದಲ್ಲಿ ಅವರ ಬೆಂಬಲಿಗರಿದ್ದಾರೆ. ಇನ್ನುಳಿದ ಸ್ಥಾನಗಳಲ್ಲಿ ಒಂದು ಸ್ಥಾನವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಭಿಸುವುದು ಬಹುತೇಕ ಖಚಿತವಾಗಿದೆ.

ಆದರೆ, ಕರ್ನಾಟಕದ ಪೈಕಿ ಗೆಲ್ಲುವ ಸೀಟುಗಳಲ್ಲಿ ಒಂದನ್ನು ಹೊರ ರಾಜ್ಯದ ನಾಯಕರಿಗೆ ನೀಡಿದರೆ ರಾಜ್ಯ ಕಾಂಗ್ರೆಸ್ ನಾಯಕರಿಂದ ಆಕ್ಷೇಪ ವ್ಯಕ್ತವಾಗುವ ಸಾಧ್ಯತೆಯಿದೆ.

ಈ ಹಿಂದಿನ ರಾಜ್ಯಸಭೆ ಚುನಾವಣೆಯಲ್ಲೂ ದೆಹಲಿ ಮೂಲದ ಅಜಯ್ ಮಾಕನ್ ಅವರಿಗೆ ಕರ್ನಾಟಕದಿಂದ ಟಿಕೆಟ್ ನೀಡಲಾಗಿತ್ತು. ಪ್ರಸ್ತುತ ಕರ್ನಾಟಕದ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಲಿಂಗಾಯತ ಸಮುದಾಯದ ನಾಯಕರಿಗೆ ಈ ಬಾರಿ ಆದ್ಯತೆ ನೀಡಬೇಕು ಎಂಬ ಬೇಡಿಕೆಗಳು ರಾಜ್ಯ ಮಟ್ಟದಲ್ಲಿ ಬಲವಾಗಿ ಕೇಳಿಬರುತ್ತಿವೆ.
.VIDEO | ರಾಜ್ಯಸಭೆ ಬೇಡ, ರಾಜ್ಯವೇ ಸಾಕು: ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?.ನಿರೀಕ್ಷೆಗಿಂತ ಕಡಿಮೆ ಮಳೆ: ಬೆಳೆ ಆಯ್ಕೆಯಲ್ಲಿ ಎಚ್ಚರ ವಹಿಸುವಂತೆ ರೈತರಿಗೆ ಸಲಹೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.