ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ ಮಾಜಿ ಸಿಬ್ಬಂದಿಗೆ ಕತಾರ್‌ನಲ್ಲಿ ಮರಣದಂಡನೆ; ಆಘಾತ ವ್ಯಕ್ತಪಡಿಸಿದ ತರೂರ್

Published 27 ಅಕ್ಟೋಬರ್ 2023, 9:45 IST
Last Updated 27 ಅಕ್ಟೋಬರ್ 2023, 9:45 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್‌ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿರುವುದಕ್ಕೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಘಾತ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ತರೂರ್‌, 'ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿರುವ ಸುದ್ದಿ ತಿಳಿದು ಆಘಾತವಾಯಿತು. ಇಡೀ ಪ್ರಕರಣದ ವರದಿ ನಿಗೂಢ ಮತ್ತು ಅಸ್ಪಷ್ಟವಾಗಿದೆ' ಎಂದಿದ್ದಾರೆ.

'ಶಿಕ್ಷೆಗೆ ಗುರಿಯಾಗಿರುವವರ ಮನವಿಯನ್ನು ಪರಿಗಣಿಸಿ, ಅವರನ್ನು ದೇಶಕ್ಕೆ ವಾಪಸ್‌ ಕರೆತರಲು ವಿದೇಶಾಂಗ ಸಚಿವಾಲಯ ಮತ್ತು ಪ್ರಧಾನಮಂತ್ರಿ ಕಚೇರಿಯು ಕತಾರ್‌ನ ಉನ್ನತಾಧಿಕಾರಿಗಳೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತವಾಗಲಿದೆ ಎಂಬ ವಿಶ್ವಾಸವಿದೆ' ಎಂದು ಹೇಳಿದ್ದಾರೆ.

ಶಿಕ್ಷೆಗೆ ಗುರಿಯಾಗಿರುವ ಎಂಟೂ ಮಂದಿ ಅಲ್ ದಹ್ರಾ ಕಂಪನಿಯ ನೌಕರರಾಗಿದ್ದರು. ಕಳೆದ ವರ್ಷದ ಆಗಸ್ಟ್‌ನಲ್ಲಿ ಇವರನ್ನು ಶಂಕಿತ ಬೇಹುಗಾರಿಕೆ ಆರೋಪದ ಅಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಆದರೆ ಇವರ ಮೇಲಿನ ಆರೋಪಗಳು ಏನಿದ್ದವು ಎಂಬುದನ್ನು ಕತಾರ್‌ ಬಹಿರಂಗಪಡಿಸಿಲ್ಲ. ಈ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಎಲ್ಲ ಬಗೆಯ ಕಾನೂನು ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT