ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಸಂಸದ ಶಶಿ ತರೂರ್ ಅವರು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ.

ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ತರೂರ್, ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವಿವರ ಬಹಿರಂಗವಾಗಿಲ್ಲ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಶಶಿ ತರೂರ್ ಸ್ಪರ್ಧಿಸಬಹುದು ಮತ್ತು ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಚುನಾವಣೆ ಪ್ರಕ್ರಿಯೆಯಲ್ಲಿ ತರೂರ್ ಕೂಡ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ:ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ

ಇವೆಲ್ಲದರ ನಡುವೆ ಸೋನಿಯಾ ಗಾಂಧಿ ಅವರನ್ನು ತರೂರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಹಿಂದೆ ಪಕ್ಷ ಸಂಘಟನೆಯಲ್ಲಿ ಸುಧಾರಣೆ ಕುರಿತಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ಜಿ-23 ನಾಯಕರಲ್ಲಿ ತರೂರ್ ಕೂಡ ಸೇರಿದ್ದಾರೆ.

ಏತನ್ಮಧ್ಯೆ ರಾಹುಲ್ ಗಾಂಧಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ರಾಜಸ್ಥಾನ, ತಮಿಳುನಾಡು, ಗುಜರಾತ್ ಹಾಗೂ ಬಿಹಾರ ಪ್ರದೇಶ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.