ತಿರುವನಂತರಪುರ: ‘ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಅದರ ನೇತೃತ್ವದ ಯುಡಿಎಫ್ ಮೈತ್ರಿಯ ಗೆಲುವನ್ನು ಮಾತ್ರ ನಾನು ಬಯಸುತ್ತೇನೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಹೇಳಿದರು.

‘ನನ್ನ ಪಕ್ಷವಾದ ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಚಾರದಲ್ಲಿ ಭಾಗಿಯಾಗುತ್ತೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ನನಗಿರುವುದು ಒಂದೇ ಪಕ್ಷ, ಅದು ಕಾಂಗ್ರೆಸ್. ಅದನ್ನು ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ’ ಎಂದು ಪುನರುಚ್ಚರಿಸಿದ ಅವರು, ‘ಈ ಕುರಿತು ಪದೇ ಪದೇ ಪ್ರಶ್ನೆ ಕೇಳುವುದನ್ನು ಮಾಧ್ಯಮಗಳು ನಿಲ್ಲಿಸಬೇಕು’ ಎಂದು ಮನವಿ ಮಾಡಿದರು.

ಕೊಚ್ಚಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತರೂರ್ ಅವರನ್ನು ಕೆಲವು ನಾಯಕರು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಇದರ ಬೆನ್ನಲ್ಲೇ, ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಗುರುವಾರ ಭೇಟಿಯಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ‘ಎಲ್ಲವೂ ಸರಿಯಾಗಿದೆ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.