ನವದೆಹಲಿ: ಭಾರತೀಯ ಮತದಾರನಿಗೆ ಯಾವತ್ತಿಗೂ ಅಚ್ಚರಿಯ ಫಲಿತಾಂಶ ನೀಡುವ ಶಕ್ತಿ ಇದೆ. ಬಿಜೆಪಿಗೂ ಒಂದಲ್ಲ ಒಂದು ದಿನ ಅದರ ಅನುಭವ ಆಗಲಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಹಾಗೂ ಮಣಿಪುರದಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ತರೂರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರಿಕೆ

ಜೈಪುರ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು, ಉತ್ತರಾಖಂಡ ಮತ್ತು ಗೋವಾದಲ್ಲಿ ಕಾಂಗ್ರೆಸ್ ಇನ್ನೂ ಉತ್ತಮ ಸಾಧನೆ ಮಾಡಬಹುದಿತ್ತು. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಯತ್ನಿಸಬಹುದಿತ್ತು. ಎರಡೂ ರಾಜ್ಯಗಳಲ್ಲಿ ಮತದಾರರ ಸಂಖ್ಯೆ ತುಂಬ ಕಡಿಮೆ ಇದೆ, ಇದೂ ಸಹ ಕೆಲಸ ಮಾಡಿರಬಹುದು ಎಂಬುದನ್ನು ನೆನಪಿನಲ್ಲಿಡಿ ಎಂದು ಹೇಳಿದ್ದಾರೆ.

ಬಿಜೆಪಿಗೆ ಎಎಪಿ ಪರ್ಯಾಯ ಅಲ್ಲ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ರಾಜಕೀಯವಾಗಿ ಮಹತ್ವದ್ದೆನಿಸಿದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಬೃಹತ್ ಪ್ರಚಾರಾಭಿಯಾನ ನಡೆಸಿದ ಹೊರತಾಗಿಯೂ ಉತ್ತಮ ಸಾಧನೆ ಮಾಡುವುದು ಪಕ್ಷಕ್ಕೆ ಸಾಧ್ಯವಾಗಿಲ್ಲ. ಅನೇಕ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಂಡಿದ್ದಾರೆ.

ಒಬ್ಬ ವ್ಯಕ್ತಿಯ ಪ್ರಚಾರದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ನಾನು ಭಾವಿಸುವುದಿಲ್ಲ. ನಮ್ಮ ಅಸ್ತಿತ್ವ ಕಡಿಮೆಯಾಗುತ್ತಿರುವ ಕೆಲವು ರಾಜ್ಯಗಳಲ್ಲಿ ಪಕ್ಷವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.