ನವದೆಹಲಿ (ಪಿಟಿಐ): ‘ತಿದ್ದುಪಡಿಗಳು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ಮತ್ತು ಸಂಸತ್ತಿನ ಚೈತನ್ಯವನ್ನು ಕುಂದಿಸುವ ರಾಜಕೀಯ ದಾಳವಾಗಿ ಬಳಕೆಯಾಗಬಾರದು’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಶನಿವಾರ ಹೇಳಿದರು.

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಮಸೂದೆ ಮಂಡನೆಯಾಗುವ ಸಾಧ್ಯತೆಗಳಿರುವ ಬಗ್ಗೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, ‘2029ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಕ್ಷೇತ್ರ ವಿಂಗಡಣೆ ಮಾಡುವ ಮತ್ತು ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಲಾಭವನ್ನು ಪಡೆಯುವ ಉದ್ದೇಶದಿಂದ ಸರ್ಕಾರವು ವಿಶೇಷ ಅಧಿವೇಶನವನ್ನು ಕರೆದಿದೆ’ ಎಂದು ಆರೋಪಿಸಿದರು.

‘ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಬೇಕೆಂದು ಕಾಂಗ್ರೆಸ್ ಪ್ರತಿಪಾದಿಸುತ್ತಲೇ ಇದೆ. ಆದರೆ ಅದು ಎಲ್ಲರನ್ನು ಒಳಗೊಂಡಂತೆ ನ್ಯಾಯಯುತವಾಗಿರಬೇಕು’ ಎಂದು ಹೇಳಿದರು.

ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಬಗೆಗಿನ ನಿಲುವನ್ನು ನಿರ್ಧರಿಸಲು ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಚಿತ್ರವನ್ನು ಹಂಚಿಕೊಂಡು ಪೋಸ್ಟ್ ಮಾಡಿದ ತರೂರ್ ಅವರು, ‘ಕಾಂಗ್ರೆಸ್ 2013ರಲ್ಲೇ ಈ ಬಗ್ಗೆ ಮಸೂದೆಯನ್ನು ಮಂಡಿಸಿ, ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿತ್ತು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-55124229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.