ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ

Last Updated 20 ಮೇ 2022, 12:54 IST
ಅಕ್ಷರ ಗಾತ್ರ

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈಯ ಭಾಯ್‌ಕಳ ಜೈಲಿನಿಂದ ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಮಗಳನ್ನೇ (ಶೀನಾ ಬೋರಾ) ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿತ್ತು.

ಇಂದ್ರಾಣಿ ಅವರು 2015ರಿಂದ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ 237 ಸಾಕ್ಷಿಗಳ ಪಟ್ಟಿ ಮಾಡಲಾಗಿದೆ. ಈವರೆಗೆ 68 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಹಾಗಾಗಿ, ವಿಚಾರಣೆಯು ಸದ್ಯಕ್ಕೆ ಪೂರ್ಣಗೊಳ್ಳದು ಎಂದು ನ್ಯಾಯಮೂರ್ತಿ ಎಲ್‌.ನಾಗೇಶ್ವರ ರಾವ್‌ ನೇತೃತ್ವದ ಪೀಠವು ಹೇಳಿತ್ತು.

ಶೀನಾ ಬೋರಾ (24) ಅವರನ್ನು 2012ರ ಏಪ್ರಿಲ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಇಂದ್ರಾಣಿ ಮುಖರ್ಜಿ, ಅವರ ಚಾಲಕನಾಗಿದ್ದ ಶ್ಯಾಮವರ್‌ ರಾಯ್‌ ಮತ್ತು ಇಂದ್ರಾಣಿ ಅವರ ಮೊದಲ ಪತಿ ಸಂಜೀವ್‌ ಖನ್ನಾ ಅವರು ಕಾರಿನಲ್ಲಿ ಶೀನಾ ಅವರನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಮೃತದೇಹವನ್ನು ಕಾಡಿನಲ್ಲಿ ಸುಡಲಾಗಿದೆ ಎಂಬ ಆರೋಪ ಅವರ ವಿರುದ್ಧ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT