ನವದೆಹಲಿ: ಮುಜಫ್ಫರ್ಪುರ ಪುನರ್ವಸತಿ ಕೇಂದ್ರದಲ್ಲಿನ ಲೈಂಗಿಕ ಹಗರಣದ ಎಲ್ಲಾ 21 ಆರೋಪಿಗಳ ವಿರುದ್ಧ ದೆಹಲಿಯ ನ್ಯಾಯಾಲಯವು ಕ್ರಿಮಿನಲ್ ಪಿತೂರಿ, ಅತ್ಯಾಚಾರ ಸೇರಿದಂತೆ ವಿವಿಧ ಆರೋಪಗಳನ್ನು ನಿಗದಿ ಮಾಡಿದೆ.

ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಕುಲಶ್ರೇಷ್ಠ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿಯೂ ನ್ಯಾಯಾಲಯವು ಆರೋಪ ನಿಗದಿ ಮಾಡಿದೆ.

ಬ್ರಿಜೇಶ್ ಠಾಕೂರ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

ಬಿಹಾರದ ಮುಜಫ್ಫರ್ಪುರದಲ್ಲಿ ಸ್ವಯಂ ಸೇವಾ ಸಂಸ್ಥೆ (ಎನ್ಜಿಒ) ನಡೆಸುತ್ತಿರುವ ಪುನರ್ವಸತಿ ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಬಾಲಕಿಯರು ಆರೋಪ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.