ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಸ್ಥಾಪಕ, ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಇಂದು (ಸೋಮವಾರ) ನಿಧನರಾದರು.

ಅವರಿಗೆ 81 ವರ್ಷ ವಯಸ್ಸಾಗಿತ್ತು.

ಶಿಬು ಸೊರೇನ್ ನಿಧನ ವಾರ್ತೆಯನ್ನು ಪುತ್ರ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ದೃಢೀಕರಿಸಿದ್ದಾರೆ.

'ತಂದೆಯ ಅಗಲಿಕೆಯಿಂದ ಶೂನ್ಯ ಆವರಿಸಿದೆ' ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರು ಕಳೆದೊಂದು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕರಾಗಿ ಶಿಬು ಸೊರೇನ್ ಗುರುತಿಸಲ್ಪಟ್ಟಿದ್ದರು. ಅಲ್ಲದೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.
.ಜಾರ್ಖಂಡ್: ಮಾಜಿ CM ಶಿಬು ಸೊರೇನ್ ಆರೋಗ್ಯ ಗಂಭೀರ; ಶಿಕ್ಷಣ ಸಚಿವಗೆ ಮಿದುಳು ಆಘಾತ.Jharkhand | ಅಪ್ಪ ಶಿಬು ಸೊರೇನ್ 20 ದಿನ; ಮಗ ಹೇಮಂತ್ 24 ಗಂಟೆ ನಾಪತ್ತೆ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.