ಶಿಗ್ಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಹಲವಾರು ವರ್ಷಗಳಿಂದ ಹೋರಾಟಗಳು ನಡೆದಿದ್ದವು. ಇದರ ಫಲವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಿಸಿದರು. ಮಂದಿರ ನಿರ್ಮಾಣದ ಶ್ರೇಯ ಅವರಿಗೆ ಸಲ್ಲಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪಟ್ಟಣದ ಸಂತೆ ಮೈದಾನದಲ್ಲಿ ಬುಧವಾರ ಶ್ರೀರಾಮ ನವಮಿ ಉತ್ಸವ ಹಾಗೂ ಬೃಹತ್ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಯುವ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಮಾತನಾಡಿ, ರಾಮ ಎಂದರೆ ಭಾರತ, ರಾಮ ಎಂದರೆ ಚಿಂತನೆ, ರಾಮ ಎಂದರೆ ಸತ್ಯ, ರಾಮ ಎಂದರೆ ಜಗತ್ತು. ರಾಮ ಮಾನವೀಯತೆ ಗುಣಗಳ ಬಗ್ಗೆ ಹೇಳಿಕೊಟ್ಟಿದ್ದಾನೆ. ಅವುಗಳನ್ನು ಪಾಲಿಸೋಣ ಎಂದು ಮಾರ್ಮಿಕವಾಗಿ ನುಡಿದರು.

ಗಂಜೀಗಟ್ಟಿ ಚರಮೂರ್ತೇಶ್ವರ ಮಠದ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಹೋಗದ ಸರ್ಕಾರಿ ಅಧಿಕಾರಿಗಳು, ಲಕ್ಕುಂಡಿಯಲ್ಲಿ ನಿಧಿ ಸಿಕ್ಕಾಗ ದೌಡಾಯಿಸಿ ಬರುತ್ತಾರೆ ಏನಿದು ವ್ಯವಸ್ಥೆ ಎಂದು ವಿಷಾದಿಸಿದರು.

ಧಾರವಾಡ ವಿಭಾಗದ ಶ್ರೀರಾಮ ಸೇನೆಯ ಅಧ್ಯಕ್ಷ ಗದಿಯಪ್ಪ ಕುರುವತ್ತಿ ಮಾತನಾಡಿದರು, ಬೀರವಳ್ಳಿಯ ಗುರುದೇವ ತಪೋವನದ ಪೂಜ್ಯ ನಂದಾ ತಾಯಿ ಸಮ್ಮುಖ ವಹಿಸಿದ್ದರು. ಯುವ ಮುಖಂಡ ಉಮೇಶ ಗೌಳಿ, ಕಾರ್ಯಕ್ರಮ ಆಯೋಜಕ ಬಸವರಾಜ ಕಲ್ಲಪ್ಪನವರ, ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-22-1755065374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.