ಮುಂಬೈ:ಅಶ್ಲೀಲ ಚಿತ್ರಗಳನ್ನು (ನೀಲಿ ಚಿತ್ರ) ತಯಾರಿಸಿದ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಜುಲೈ 23ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.

ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರುಸೋಮವಾರ ಬಂಧಿಸಿದ್ದರು. ಪೊಲೀಸರು ಮತ್ತೊಬ್ಬ ಆರೋಪಿ ರಿಯಾನ್ ಜಾನ್‌ನನ್ನು ಬಂಧಿಸಿದ್ದು ಆತನನ್ನು ಜುಲೈ 23ರವರೆಗೂ ನ್ಯಾಯಾಲಯ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಕುಂದ್ರಾ ಹಾಗೂ ರಿಯಾನ್‌ನನ್ನು ಮುಂಬೈ ಪೊಲೀಸರು ಇಲ್ಲಿನ ಎಸ್ಟ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಓದಿ:ನಟಿಗೆ ನಗ್ನವಾಗಿ ಕಾಣಿಸಿಕೊಳ್ಳಲು ಹೇಳಿದ್ದ ರಾಜ್ ಕುಂದ್ರಾ?

ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ ಕುಂದ್ರಾ ಅವರನ್ನು ಈ ಪ್ರಕರಣದಲ್ಲಿ ನಾವು ಬಂಧಿಸಿದ್ದೇವೆ. ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಈ ಬಗ್ಗೆ ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ’ ಎಂದು ಮುಂಬೈ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ:ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಆರೋಪ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.